‌‌‌ಮಲ್ಲಿಕಾರ್ಜುನ ಖರ್ಗೆ ಜೀವಬೆದರಿಕೆ ಕರೆ; ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ

ಬೆಂಗಳೂರು
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಜೀವಬೆದರಿಕೆ ಕರೆ ಬಗ್ಗೆ ಚರ್ಚಿಸಿದ ರಾಜ್ಯ ಕಾಂಗ್ರೆಸ್ ನಾಯಕರು, ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಎರಡು ವರ್ಷಗಳ ಹಿಂದೆ ದೆಹಲಿಯಲಿದ್ದ ತಮಗೆ ಬೆದರಿಕೆ ಕರೆ ಬಂದಿತ್ತು. ಆಗ ಲೋಕಸಭೆ ಸ್ಪೀಕರ್ ಹಾಗೂ ಪ್ರಧಾನಿಯವರ ಗಮನಕ್ಕೆ ತಂದು ದೆಹಲಿಯ ತುಘಲಕ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಈ ಬಗ್ಗೆ ಇನ್ನೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ. ಈಗ ಮತ್ತೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಪುತ್ರ ಪ್ರಿಯಾಂಕ್ ಖರ್ಗೆಗೂ ಕರೆ ಮಾಡಿ ಬೆದರಿಕೆ ಹಾಕಿದ್ದು, ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಪೊಲೀಸರು ಏನು ಮಾಡುತ್ತಾರೆಯೋ ನೋಡೋಣ ಎಂದರು.
ಯಾರು ಕರೆ ಮಾಡಿದ್ದಾರೆ ಎನ್ನುವುದನ್ನು ಪೊಲೀಸರು ಪತ್ತೆ ಹೆಚ್ಚಬೇಕು. ಸರ್ಕಾರದ ಬಳಿ ಎಲ್ಲಾ ಮಾಹಿತಿ ಸಿಗಲಿದೆ. ಸರ್ಕಾರ ತನಿಖೆ ನಡೆಸಿ ಕರೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಿಒಡಿ ತನಿಖೆಗೆ ಇದನ್ನ ವಹಿಸಬೇಕು ಒಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *